ಕಲಘಟಗಿ ಅಪಘಾತ ಪ್ರಕರಣ..ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಮುಖಂಡ. ಗಾಯಾಳುಗಳಿಗೆ ಧೈರ್ಯ ತುಂಬಿದ ನಾಗರಾಜ ಛಬ್ಬಿ….
ಹುಬ್ಬಳ್ಳಿ:-ಕಲಘಟಗಿ ರಸ್ತೆಯಲ್ಲಿ ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಬಿಜೆಪಿ ಮುಖಂಡ ನಾಗರಾಜ ಛಬ್ಬಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಕಲಘಟಗಿಯ ತಡಸ ಕ್ರಾಸ್ ಬಳಿ ಲಾರಿ ಮತ್ತು ಟಾಟಾ ಏಸ್ ನಡುವೆ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರನ್ನೂ ಭೇಟಿ ಮಾಡಿದ ನಾಗರಾಜ ಛಬ್ಬಿ ಸಾಂತ್ವನ ಹೇಳುವ ಮೂಲಕ ಭಯ ಪಡುವ ಅವಶ್ಯಕತೆ ಇಲ್ಲಾ. ನಾವೆಲ್ಲಾ ನಿಮ್ಮ ಕುಟುಂಬದೊಂದಿಗೆ ಇದ್ದೇವೆ ಎಂದು ಧೈರ್ಯ ತುಂಬಿದರು..
ಅಲ್ಲದೇ ಕಿಮ್ಸ್ ವೈದ್ಯರಿಗೆ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ ಕಿರಣ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.