ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ್ದ ಸಮ್ಮತ್ತಿ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಅಂತಿಮ ತೀರ್ಪು ಇಂದು ಪ್ರಕಟಗೊಳಿಸಿದೆ.
ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಹೈಕೋರ್ಟ್ನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ.
ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಹಾಗೂ ಸಿಬಿಐನಿಂದ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ಸದ್ಯ ಡಿಕೆ ಶಿವಕುಮಾರ್ ಅವರಿಗೆ ವಿಭಾಗೀಯ ಪೀಠ ಬಿಗ್ ರಿಲೀಫ್ ನೀಡಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆ ಅನುಮತಿ ವಿಚಾರ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಸಿಬಿಐ ಹಾಗೂ ಬಿಜೆಪಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಕರಣ ವಿಚಾರಣೆಗೆ ಅರ್ಹವಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತು ಸುಪ್ರೀಂ ಕೋರ್ಟ್ ತಿರ್ಮಾನಿಸಬೇಕು ಎಂದು ಹೇಳಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ತೀರ್ಪು ಪ್ರಕಟಿಸಿದೆ.