ಚಾರ್ಜ್ʼಶೀಟ್ ಸಲ್ಲಿಕೆಗೆ ಕೌಂಟ್ʼಡೌನ್.! ರೌ‘ಡಿ’ ಗ್ಯಾಂಗ್ ಕೃತ್ಯ ಬಯಲಾಗುತ್ತಾ?

Share to all

ಬೆಂಗಳೂರು:– ರೇಣುಕಾ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗುತ್ತದೆ. ಎಸ್‌ಐಟಿ ಪೊಲೀಸರು ಚಾರ್ಜ್‌ಶೀಟ್‌ ಪೂರ್ಣಗೊಳಿಸುತ್ತಿದ್ದಾರೆ. ಆರೋಪ ಪಟ್ಟಿಯನ್ನು 2-3 ಬಾರಿ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಹೆಡ್ ಆಫ್ ದಿ ಚಾರ್ಜ್‌ಶೀಟ್‌ ಹೇಗಿರಬೇಕು? ಪ್ರಕರಣದಲ್ಲಿನ ಸಾಕ್ಷಿಗಳ ಹೇಳಿಕೆ ಎಲ್ಲಿ ಹಾಕಬೇಕು? ಡಿಜಿಟಲ್‌ ಸಾಕ್ಷ್ಯಗಳನ್ನು ಹೇಗೆ ನಮೂದಿಸಬೇಕು? ಹೀಗೆ ಎಲ್ಲಾ ಅಂಶಗಳಲ್ಲೂ ಪೊಲೀಸರು ಫುಲ್‌ ಅಲರ್ಟ್‌ ಆಗಿದ್ದಾರೆ.

ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್‌ ಅವರು ಖುದ್ದು ಚಾರ್ಜ್‌ಶೀಟ್‌ ಡ್ರಾಫ್ಟ್‌ ಕಾಪಿ ಮೇಲೆ ನಿಗಾ ಇಟ್ಟಿದ್ದಾರೆ. ಬಹುತೇಕ ಪ್ರಕರಣದಲ್ಲಿ ಚಾರ್ಜ್‌ಶೀಟ್‌ನಲ್ಲಿರುವ ಲೋಪ ವಿಚಾರವನ್ನು ವಕೀಲರು ಪ್ರಸ್ತಾಪ ಮಾಡಿ ಆರೋಪಿಗಳನ್ನು ಪಾರು ಮಾಡುತ್ತಾರೆ. ಈ ಕಾರಣಕ್ಕೆ ಕಾನೂನು ತಜ್ಞರಿಂದ ಸಲಹೆ ಪಡೆದು ಆರೋಪ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ.


Share to all

You May Also Like

More From Author