ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮತಾಂತರಕ್ಕೆ ಒತ್ತಾಯಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

Share to all

ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯಕೀಯ ವಿದ್ಯಾರ್ಥಿ ಕಿರುಕುಳ ನೀಡಿಉತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ ಮಣಿಪಾಲ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಾಂಗ ಮಾಡುತ್ತಿದ್ದನು. ಈ ವೇಳೆ ತನ್ನ ಜೊತೆ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯ ಜೊತೆ ಸ್ನೇಹ ಬೆಳಸಿದ್ದಾನೆ. ಇಬ್ಬರೂ ಹೊರ ರಾಜ್ಯದವರಾಗಿದ್ದು, ವಿದ್ಯಾಭ್ಯಾಸಕ್ಕಾಗಿ ಇಲ್ಲಿಗೆ ಬಂದಿದ್ದಾರೆ.

ಇಬ್ಬರ ನಡುವೆ ಸ್ನೇಹ ಬೆಳೆದ ನಂತರ, ಪರಸ್ಪರ ಫೋನ್ ನಂಬರ್ ಬದಲಾಯಿಸಿಕೊಂಡಿದ್ದಾರೆ. ಮುಂದೆ, ಗೆಳೆತನ ಪ್ರೀತಿಗೆ ತಿರುಗಿದೆ. ಇಬ್ಬರು ಪರಸ್ಪರ ಗಾಢವಾಗಿ ಪ್ರೀತಿಸಲು ಆರಂಭಿಸಿದ್ದಾರೆ. ನಂತರ, ಇದೇ ವರ್ಷ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆ ವೇಳೆ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಪ್ರೇಯಸಿಯ ಎದುರು ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬಳಿಕ, ಮಾರ್ಚ್​​ 11 ರಂದು ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ತನ್ನ ಪ್ರೇಯಸಿಯ ರೂಮ್​ಗೆ ಹೋಗಿದ್ದಾನೆ. ಈ ವೇಳೆ ಪ್ರೇಯಸಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಾನೆ. ಆಗ, ಪ್ರೇಯಸಿ ನಿರಾಕರಿಸಿದಾಗ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಆಕೆಯ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದಾನೆ. ಅಲ್ಲದೇ, ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದಾನೆ. ನಿರಂತರವಾಗಿ, ಪೋನ್‌ನಲ್ಲಿ ಕಿರುಕುಳ ಕೊಡಲು ಆರಂಭಿಸಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ದಾಖಲಿಸಿದ್ದಾಳೆ.

 


Share to all

You May Also Like

More From Author