ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ತುಂಬಾ ಜನಪ್ರಿಯವಾದಂತ ಯೋಜನೆಯಾಗಿದೆ ಹಾಗಾಗಿ ಇದು ಮಹಿಳೆಯರಿಗೆ ಅಚ್ಚುಮೆಚ್ಚು ಯೋಜನೆ ಎಂದರೆ ತಪ್ಪಾಗುವುದಿಲ್ಲ..! ಈ ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ ಸುಮಾರು 22 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ.
ಹಾಗಾಗಿ ಸಾಕಷ್ಟು ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಗೃಹಲಕ್ಷ್ಮಿ ಯೋಜನೆ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಶೀಘ್ರದಲ್ಲಿ ಮನೆ ಯಜಮಾನಿಗೆ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ಹೌದು ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,
ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು.