ದೇವನಹಳ್ಳಿ:- ಲಂಚ ಪಡೆಯುವ ವೇಳೆ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ಪಿಡಿಓ ಪದ್ಮನಾಭ್ ‘ಲೋಕಾ’ ಬಲೆಗೆ ಬಿದ್ದವರು ಎನ್ನಲಾಗಿದೆ.
ಖಾಸಗಿ ಬಡಾವಣೆಗೆ ನೆಲೆದಡಿ ಕೇಬಲ್ ಅಳವಡಿಸಲು ಪದ್ಮನಾಭ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವ ವೇಳೆ PDO ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಲ್ಲಿಕಾರ್ಜುನ ಎಂಬುವವರ ಬಳಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿದೆ.
PDO ಮುಂಗಡವಾಗಿ ಮೂರು ಲಕ್ಷ ರೂಪಾಯಿ ಪಡೆದಿದ್ದರು. ಉಳಿದ ಎರಡು ಲಕ್ಷ ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಪದ್ಮನಾಭ್ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆ ಪಿಡಿಓ ಪದ್ಮನಾಬ್ ವಿರುದ್ದ ಅಕ್ರಮ ಆಸ್ತಿಗಳಿಕೆ ಆರೋಪದಡಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಇದು ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯಲ್ಲಿ ನಡೆದ ಘಟನೆ ಆಗಿದೆ.