ಕೊಪ್ಪಳ:- ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿದ ಜೋಡಿಯ ಫೋಟೋ ವೈರಲ್ ಆಗಿದ್ದು, ನಿಷೇಧ ಇದ್ದರೂ ಎಂಟ್ರಿ ಸಿಕ್ಕಿದ್ದೇಗೆ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಮೇಲೆ ಯಾವುದೇ ತರಹದ ಚಿತ್ರೀಕರಣ ನಿಷೇಧಿಸಲಾಗಿದೆ. ಆದರೂ ಕೂಡ ತುಂಗಭದ್ರಾ ಜಲಾಶಯದ ಮೇಲಿನ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಆಗಿದೆ.
ನಿಷೇಧ ಇದ್ದರೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹೇಗೆ ನಡೆಯಿತು? ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ಅಧಿಕಾರಿಗಳು ಅನುಮತಿ ನೀಡಿದ್ರಾ? ಎಂಬ ಪ್ರಶ್ನೆಗಳು ಉದ್ಭವಾಗಿವೆ. ಯಾವಾಗ ಫೋಟೋ ಶೂಟ್ ಆಗಿದೆ, ಪರವಾನಿಗೆ ನೀಡಿದವರು ಯಾರು ಎಂಬುವುದರ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಕಳೆದ ತಿಂಗಳು ಆಗಸ್ಟ್ 10 ರಂದು ತುಂಗಭದ್ರಾ ಜಲಾಶಯದ 19ನೇ ಕ್ರಸ್ಟಗೇಟ್ ಕೊಚ್ಚಿಕೊಂಡು ಹೋಗಿತ್ತು. ಇದು ದೇಶದಲ್ಲಿ ಸಾಕಷ್ಟು ಸುದ್ದಿಯಾಗಿತ್ತು.