ನವದೆಹಲಿ: ಹರಿಯಾಣ ಚುನಾವಣೆಗೂ ಮುಂಚಿತವಾಗಿ ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ಮತ್ತು ಎಎಪಿ ಹರಿಯಾಣ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಮಾತುಕತೆಯಲ್ಲಿ ತೊಡಗಿವೆ.
ಹೌದು ಇಂದು ಮಧ್ಯಾಹ್ನ ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಫೋಗಲ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಅಧಿಕೃತ ಸೇರ್ಪಡೆಗೂ ಮುನ್ನ ಅವರು ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾದರು.
ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ರೈಲ್ವೆ ಇಲಾಖೆಯ ತಮ್ಮ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.