MI ಅಭಿಮಾನಿಗಳಿಗೆ ಖುಷಿ ವಿಚಾರ: ತಂಡ ಬಿಟ್ಟು ಹೋಗಲ್ಲ ಸೂರ್ಯಕುಮಾರ್ ಯಾದವ್!

Share to all

ಸೂರ್ಯನನ್ನು ಉಳಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಸರತ್ತು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಸೀಸನ್​ನಲ್ಲೂ ಸ್ಕೈ ಎಂಐ ತಂಡದ ಪರವೇ ಆಡಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ MI ಫ್ಯಾನ್ಸ್ ಗೆ ಗುಡ್ ನ್ಯೂಸ್ ಸಿಕ್ಕಿದೆ.

ಮುಂಬೈ ಇಂಡಿಯನ್ಸ್ ತಂಡದಿಂದ ಸೂರ್ಯಕುಮಾರ್ ಯಾದವ್ ಹೊರಬರಲಿದ್ದಾರಾ ಎಂಬುದರ ಸ್ಪಷ್ಟನೆಗಾಗಿ ಸ್ಪೋರ್ಟ್ಸ್​ ತಕ್ ಚಾನೆಲ್​ನವರು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮೂಲದವನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಸೂರ್ಯಕುಮಾರ್ ಅವರನ್ನು ರಿಟೈನ್ ಮಾಡಿಕೊಳ್ಳಲು ಬಯಸುತ್ತಿರುವುದಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಾಗ್ಯೂ ಸೂರ್ಯಕುಮಾರ್ ಯಾದವ್ ಅವರು ಮುಂಬೈ ಇಂಡಿಯನ್ಸ್ ತಂಡದಲ್ಲೇ ಉಳಿಯಲಿದ್ದಾರಾ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಬದಲಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಸೂರ್ಯಕುಮಾರ್ ಯಾದವ್ ಅವರನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದೇವೆ. ಸದ್ಯ ಕೇಳಿ ಬರುತ್ತಿರುವುದು ಕೇವಲ ಊಹಾಪೋಹಗಳಷ್ಟೇ. ಅವರು ಇನ್ನೂ ಸಹ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮೂಲಗಳು ತಿಳಿಸಿವೆ.

ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಸೂರ್ಯಕುಮಾರ್ ಯಾದವ್ ಪಡೆಯುತ್ತಿರುವುದು ಕೇವಲ 8 ಕೋಟಿ ರೂ. ಮಾತ್ರ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಬಾರಿ ಮುಂಬೈ ಫ್ರಾಂಚೈಸಿಯು ಸೂರ್ಯನನ್ನು ರಿಟೈನ್ ಮಾಡಿಕೊಳ್ಳಬೇಕಿದ್ದರೆ ಬೃಹತ್ ಮೊತ್ತ ಪಾವತಿಸಲೇಬೇಕಾಗುತ್ತದೆ. ಆದರೆ ಅತ್ತ ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ಕೂಡ ಹೆಚ್ಚಿನ ಮೊತ್ತದ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.


Share to all

You May Also Like

More From Author