ಸರಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿಗೆ ಸಮಿತಿ ರಚನೆ. ಸಮಿತಿ ರಚಿಸಿ ಆದೇಶ ಮಾಡಿದ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು:-ಸರಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ,ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಸಮಿತಿ ರಚನೆ. ಸಮಿತಿ ರಚಿಸಿ ಸಿಎಂ ಸಿದ್ಧರಾಮಯ್ಯ ಆದೇಶ ಮಾಡಿದ್ದಾರೆ.
ಸಮಿತಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅದ್ಯಕ್ಷರು.ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ. ಕಂದಾಯ ಸಚಿವ ಕೃಷ್ಣ ಬೈರೇಗೌಡ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ.ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರನ್ನು ಸದಸ್ಯರಾಗಿ ನೇಮಕ ಮಾಡಿ ಆದೇಶ ಮಾಡಿದ್ದಾರೆ.