ಬೆಂಗಳೂರು: ಹಿಟ್ & ರನ್ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ. ಮೂವರು ಯುವಕರು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಹಿತ್(22), ಸುಚಿತ್(22), ಹರ್ಷ(22) ಮೃತ ವಿದ್ಯಾರ್ಥಿಗಳು.
ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.