ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

Share to all

ರಾಮನಗರ: ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ. ಹೌದು ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರವನ್ನು ಜೂನ್‌ 25 ರಂದು ಏರಿಕೆ ಮಾಡಿತ್ತು. ಪ್ರತಿ ಲೀಟರ್‌ ಹಾಲಿನ ದರ 2 ರೂ. ಹೆಚ್ಚಿಸಿತ್ತು. ಪ್ರತಿ ಲೀಟರ್‌ ಪ್ಯಾಕೆಟ್‌ ಹಾಲಿನ ದರವನ್ನ 2 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿತ್ತು. ಇದರ ಜೊತೆ ಪ್ಯಾಕೆಟ್‌ ಗಾತ್ರವನ್ನು ದೊಡ್ಡದು ಮಾಡಿತ್ತು.1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲನ್ನು 1,050 ಎಂಎಲ್‌, ಅರ್ಧ ಲೀಟರ್‌ ಪ್ಯಾಕೆಟ್‌ ಅನ್ನು 550 ಎಂಎಲ್‌ ಹಾಲು ಸಿಗುವಂತೆ ಗಾತ್ರವನ್ನು ದೊಡ್ಡದು ಮಾಡಿತ್ತು.

ಇನ್ನೂ ನೀವೆಲ್ಲ ರೈತರ ಮಕ್ಕಳಿದ್ದಾರೆ, 3 ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದ್ರೂ ಲಬ್ಬೊ ಲಬ್ಬೋ ಅಂತಾ ಹೇಳುತ್ತಾರೆ. ನಾವು ರೈತರ ಮಕ್ಕಳು, ರೈತರು ಮಕ್ಕಳು ಎಂದು ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ? ಏನೂ ಮಾಡದೇ ನಾವು ರೈತರ ಮಕ್ಕಳು ಅಂತಾ ಹೇಳುತ್ತಾರೆ ಎಂದು ಜೆಡಿಎಸ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

 


Share to all

You May Also Like

More From Author