ಹುಬ್ಬಳ್ಳಿ:- ಹಳೇವೈಷಮ್ಯದ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡ್ಯಾನ್ಸ್ ಮಾಡುವಾಗ ವ್ಯಕ್ಯಿಯೋರ್ವನಿಗೆ ಚಾಕುವಿನಿಂದ ಇರಿದ ಘಟನೆ ಬೆಂಡಿಗೇರಿ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಡಿಗೇರಿ ಪೋಲೀಸ ಠಾಣಾ ವ್ಯಾಪ್ತಿಯ ಮಂಟೂರ ರಸ್ತೆಯಲ್ಲಿ ನಡೆಯುತ್ತಿದ್ದ ಗಣೇಶ ವಿಸರ್ಜನೆ ವೇಳೆ ಡಿಜಿ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಅಬ್ರಾಹಂ ಎಂಬಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಅಬ್ರಾಂ ಎಂಬಾತನಿಗೆ ಹೊಟ್ಟೆ ಮತ್ತು ಕೈಗೆ ಚಾಕುವಿನಿಂದ ಇರಿದ ಹಿನ್ನೆಲೆಯಲ್ಲಿ ಆತನನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಯಾವುದೇ ರೀತಿಯ ತೊಂದರೆ ಇಲ್ಲಾ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.ಸ್ಥಳಕ್ಕೆ ಡಿಸಿಪಿ ರವೀಶ ಸೇರಿದಂತೆ ಹಿರಿಯ ಪೋಲೀಸ ಅಧಿಕಾರಿಗಳು ಆಗಮಿಸಿ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.