ಹೋಮ್ ಮಿನಿಸ್ಟರ್ ಪರಮೇಶ್ವರ ಬಲಗೈ ಬಂಟನ ಮರ್ಡರ್.ಆರೋಪಿಗಳು ಎಸ್ಕೇಪ್.
ಕೋಲಾರ –
ರಾಜ್ಯದೆಲ್ಲೇಡೆ ಇಂದು ಆಯುಧ ಪೂಜೆಯ ಸಡಗರ ಸಂಭ್ರಮ ಈ ನಡುವೆ ಕೋಲಾರದಲ್ಲಿ ಆಯುಧ ಪೂಜೆಯ ದಿನದಂದೇ ಕಾಂಗ್ರೇಸ್ ಪಕ್ಷದ ಮುಖಂಡರೊರ್ವನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.ಹೌದು ಗೃಹ ಸಚಿವ ಡಾ ಜಿ ಪರಮೇಶ್ವರ ಕಾಂಗ್ರೇಸ್ ಪಕ್ಷದ ಮುಖಂಡ ರಮೇಶ್ ಕುಮಾರ್ ಬಲಗೈ ಬಂಟ ಶ್ರೀನಿವಾಸ್ ನೆ ಕೊಲೆಯಾದವರಾಗಿದ್ದಾರೆ.ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದಾರೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಹಲ್ಲೆ ನಡೆದಿದೆ ಅಪರಿಚಿತ ದುಷ್ಕರ್ಮಿಗಳು ಶ್ರೀನಿವಾಸ್ ಅವರ ಎದೆ ತಲೆ ಸೇರಿದಂತೆ ಎಲ್ಲೇಂದರಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಆದರೆ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ್ ಆಸ್ಪತ್ರೆ ಮುಟ್ಟವೇ ಮುನ್ನವೇ ದಾರಿ ಮಧ್ಯದಲ್ಲಿಯೇ ಸಾವಿಗೀಡಾಗಿದ್ದಾರೆ.ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತರಾಗಿದ್ದರು ಎಂ ಶ್ರೀನಿವಾಸ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಎಂ ಶ್ರೀನಿವಾಸ್ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡರಾಗಿದ್ದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರೂ ಆಗಿದ್ದರು. ಕೋಲಾರ ಜಿಲ್ಲೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿತ್ತು.ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿಯೇ ಮೃತರಾಗಿದ್ದಾರೆ.ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದು ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಶ್ರೀನಿವಾಸಪುರ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು.ಕೋಲಾರದ ಜಾಲಪ್ಪಾ ಆಸ್ಪತ್ರೆಯಲ್ಲಿ ಶ್ರೀನಿವಾಸ್ ಅವರ ಪಾರ್ಥಿವ ಶರೀರರವನ್ನಿಟ್ಟು ಗೃಹ ಸಚಿವರು ಸೇರಿದಂತೆ ಕಾಂಗ್ರೇಸ್ ಪಕ್ಷದ ಮುಖಂಡರು ಇವರು ಆಪ್ತರು ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ.ಈ ಒಂದು ಘಟನೆಯನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪೊಲೀಸರ ಕೈ ತಪ್ಪಿದೆಯಾ ಎಂಬ ಮಾತುಗಳನ್ನು ರಾಜ್ಯದ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ ಗೃಹ ಸಚಿವರ ಆಪ್ತರ ಪರಸ್ಥಿತಿ ಹೀಗಾದರೆ ಇನ್ನೂ ಜನ ಸಾಮಾನ್ಯರ ಸ್ಥಿತಿ ಹೇಗೆ ಪೊಲೀಸರು ಕಟ್ಟು ನಿಟ್ಟಾಗಿ ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂಬ ಒತ್ತಾಯವನ್ನು ಜನ ಸಾಮಾನ್ಯರು ರಾಜ್ಯ ಸರ್ಕಾರಕ್ಕೆ ಮಾಡುತ್ತಿದ್ದಾರೆ.
ಉದಯ ವಾರ್ತೆ ಕೋಲಾರ.