ದೆಹಲಿಗೆ ಮತ್ತೆ ಮಹಿಳಾ ಸಿಎಂ! ಮುಖ್ಯಮಂತ್ರಿ ಕುರ್ಚಿಯನ್ನು ಆಪ್ ನಾಯಕಿಗೆ ಬಿಟ್ಟುಕೊಟ್ಟ ಕೇಜ್ರಿವಾಲ್!

Share to all

ನವದೆಹಲಿ: ರಾಜೀನಾಮೆ ನೀಡುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ತಗ್ಗಿಸಿ ಬಿಜೆಪಿ ವಿರೋಧಿ ನೆಲೆಯನ್ನು ದೆಹಲಿಯಲ್ಲಿ ಗಟ್ಟಿಗೊಳಿಸಲು ಅರವಿಂದ್ ಕೇಜ್ರಿವಾಲ್ ರಾಜಕೀಯ ನೀತಿ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಕೇಜ್ರಿವಾಲ್ ಭಾರಿಸಿದ ಭರ್ಜರಿ ಸಿಕ್ಸರ್​ ಎಂದೇ ರಾಜಕೀಯ ತಜ್ಞರು ಬಣ್ಣಿಸುತ್ತಿದ್ದಾರೆ. ಇನ್ನೂ ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ದೆಹಲಿ ಸಚಿವ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇಂದಿನ ಎಎಪಿ ಸಭೆಯಲ್ಲಿ, ಪಕ್ಷದ ನಾಯಕ ದಿಲೀಪ್ ಪಾಂಡೆ ಅವರು, ಸಿಎಂ ಯಾರೆಂದು ಕೇಜ್ರಿವಾಲ್ ನಿರ್ಧರಿಸಬೇಕೆಂದು ಪ್ರಸ್ತಾಪಿಸಿದರು. ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದುನಿಂತು ಅದನ್ನು ಒಪ್ಪಿಕೊಂಡರು. ಎಂಎಸ್ ಅತಿಶಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆಂದು ಮೂಲಗಳು ಹೇಳಿವೆ.

ಅತಿಶಿ ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು PWD ಪ್ರಮುಖ ಖಾತೆಗಳನ್ನು ಹೊಂದಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಅತಿಶಿ ಅವರು ದೆಹಲಿಯ ಶಾಲೆಗಳಲ್ಲಿ ಶಿಕ್ಷಣವನ್ನು ಕೂಲಂಕಷವಾಗಿ ಪರಿಶೀಲಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

 


Share to all

You May Also Like

More From Author