ಬಿಹಾರ:-ಪಾಪಿ ಗಂಡನೋರ್ವ ಚಾಕುವಿನಿಂದ ಕತ್ತು ಸೀಳಿ ಹೆಂಡತಿ ರುಂಡ ಹಿಡಿದು ಊರೆಲ್ಲಾ ತಿರುಗಾಡಿದ ಘಟನೆ ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಜರುಗಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಪೂಜಾದೇವಿಯನ್ನು ಹರಿತವಾದ ಚಾಕುವಿನಿಂದ ಕತ್ತು ಸೀಳಿ ಕೊಲೆಗೈದಿದ್ದಾನೆ ಎನ್ನುವ ಮಾಹಿತಿ ನಮಗೆ ಸಿಕ್ಕಿತ್ತು ಎಂದು ಡಿಎಸ್ಪಿ ಮನೋಜ್ ಮೋಹನ್ ತಿಳಿಸಿದ್ದಾರೆ.
ಪೊಲೀಸರು ತಕ್ಷಣ ಕ್ರಮ ಕೈಗೊಂಡು ಘಟನೆಯ ಪ್ರಮುಖ ಆರೋಪಿ ಅರ್ಜುನ್ ಶರ್ಮಾನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಘಟನೆಗೆ ಬಳಸಿದ್ದ ಆಯುಧ ಹಾಗೂ ಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.