ಸ್ಟಾರ್ ಬ್ಯಾಟ್ಸ್ ಮನ್ ಕಿಂಗ್ ಕೊಹ್ಲಿ ಅವರು ಅಭ್ಯಾಸದ ವೇಳೆ ತಮ್ಮ ಪವರ್ಫುಲ್ ಶಾಟ್ನಿಂದ ಕ್ರೀಡಾಂಗಣದ ಡ್ರೆಸ್ಸಿಂಗ್ ಕೋಣೆಯ ಗೋಡೆಯಲ್ಲಿ ರಂಧ್ರವುಂಟಾಗುವಂತೆ ಮಾಡಿದ್ದಾರೆ. ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಉಭಯ ತಂಡಗಳು ಚೆನ್ನೈಗೆ ಬಂದಿಳಿದಿವೆ. ಟೀಂ ಇಂಡಿಯಾ ಈಗಾಗಲೇ ಚೆನ್ನೈನಲ್ಲಿ ಅಭ್ಯಾಸ ಆರಂಭಿಸಿದ್ದರೆ, ಬಾಂಗ್ಲಾದೇಶ ತಂಡ ನಿನ್ನೆಯಷ್ಟೇ ಚೆನ್ನೈ ತಲುಪಿದೆ. ಮೂರ್ನಾಲ್ಕು ದಿನಗಳಿಂದ ಚೆನ್ನೈನಲ್ಲಿ ಅಭ್ಯಾಸ ನಡೆಸುತ್ತಿರುವ ಟೀಂ ಇಂಡಿಯಾ ಆಟಗಾರರು ನೆಟ್ಸ್‌ನಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ.
ಡಬ್ಲ್ಯುಟಿಸಿ ಫೈನಲ್ ದೃಷ್ಟಿಯಿಂದ ಈ ಸರಣಿ ಟೀಂ ಇಂಡಿಯಾಗೆ ಮಹತ್ವದ್ದಾಗಿದೆ. ಹೀಗಾಗಿಯೇ ತಂಡದ ಆಟಗಾರರು ಸಾಕಷ್ಟು ಸಮಯವನ್ನು ನೆಟ್ಸ್‌ನಲ್ಲಿ ಕಳೆಯುತ್ತಿದ್ದಾರೆ. ಅದರಂತೆ ತಿಂಗಳುಗಳ ಬಳಿಕ ಟೆಸ್ಟ್ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ ಅಭ್ಯಾಸದ ವೇಳೆ ತಮ್ಮ ಪವರ್ಫುಲ್ ಶಾಟ್ನಿಂದ ಕ್ರೀಡಾಂಗಣದ ಡ್ರೆಸ್ಸಿಂಗ್ ಕೋಣೆಯ ಗೋಡೆಯಲ್ಲಿ ರಂಧ್ರವುಂಟಾಗುವಂತೆ ಮಾಡಿದ್ದಾರೆ.
ನಿನ್ನೆ ನಡೆದ ಅಭ್ಯಾಸದ ಅವಧಿಯಲ್ಲಿ ನೆಟ್ಸ್‌ನಲ್ಲಿ ಬಿರುಸಿನ ಬ್ಯಾಟಿಂಗ್ ಅಭ್ಯಾಸ ನಡೆಸಿದ ವಿರಾಟ್ ಕೊಹ್ಲಿ, ಬಿಗ್ ಶಾಟ್ ಆಡಿದರು. ಈ ವೇಳೆ ಕೊಹ್ಲಿ ಹೊಡೆದ ಶಾಟ್ ಡ್ರೆಸ್ಸಿಂಗ್ ರೂಮಿನ ಗೋಡೆಯನ್ನು ಒಡೆದಿದೆ. ಅದರ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.