HSRP ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್ ಗುಡ್ ನ್ಯೂಸ್!

Share to all

ಬೆಂಗಳೂರು: ನಿಮ್ಮ ಬಳಿ ಇರುವ ವಾಹನದ ನಂಬರ್‌ ಪ್ಲೇಟ್ ಯಾವುದು? ಸ್ಟಿಕ್ಕರ್ ರೀತಿಯ ನಂಬರ್ ಪ್ಲೇಟ್ ಹಾಕಿದ್ದೀರಾ? ಹಾಗಾದ್ರೆ ಇದನ್ನ ಬದಲಿಸಬೇಕಾಗುತ್ತೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಹಾಕಬೇಕಾಗುತ್ತೆ. ದೇಶಾದ್ಯಂತ ಈ ರೀತಿಯ ನಂಬರ್ ಪ್ಲೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.

ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್‌ ಸಿಕ್ಕಿದೆ. ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್‌ ತಪ್ಪಿದೆ.


Share to all

You May Also Like

More From Author