ಜಾತಿ ನಿಂದನೆ, ಬೆದರಿಕೆ ಕೇಸ್ ಸಂಕಷ್ಟ; ಶಾಸಕ ಮುನಿರತ್ನಗೆ ಬೇಲಾ? ಜೈಲೇ ಗತಿನಾ? ನಾಳೆ ಜಾಮೀನು ಅರ್ಜಿ ವಿಚಾರಣೆ

Share to all

ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಅಶೋಕ ನಗರ ಠಾಣೆ ಪೊಲೀಸರು ಆರ್​. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಪೊಲೀಸರು ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ದೀಗ ಅವರ ಜಾಮೀನಿ ಅರ್ಜಿ ಆದೇಶವನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.

ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು, ಮುನಿರತ್ನ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ. ಈ

ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದ, ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ ಘಟನೆಯಾಗಿರುವುದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.

ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದು, 2015 ರಿಂದ 2020 ರವರೆಗೆ ದೂರುದಾರ ಪಾಲಿಕೆ ಸದಸ್ಯರಾಗಿದ್ದರು. ನಂತರ ಭಿನ್ನಾಭಿಪ್ರಾಯ ಬಂದಿತ್ತೆಂದು ದೂರಿನಲ್ಲಿ ಹೇಳಲಾಗಿದೆ. 2015 ರಿಂದ ಯಾವಾಗ ನಿಂದಿಸಿದ್ದರೆಂದು ಹೇಳಿಲ್ಲ 3 (1) r,s ಸೆಕ್ಷನ್ ಅನ್ವಯಿಸುವುದಿಲ್ಲವೆಂದು ಎಸ್ ಪಿಪಿ ಒಪ್ಪಿಕೊಂಡಿದ್ದಾರೆ. 3 (1) u ಅಡಿಯೂ ದೂರಿನಲ್ಲಿನ ಆರೋಪ ಅನ್ವಯವಾಗುವುದಿಲ್ಲ. 41 ಎ ಅಡಿ ನೋಟಿಸ್ ನೀಡಬೇಕಿತ್ತು. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್, ನಾಳೆಗೆ ಆದೇಶ ಕಾಯ್ದಿರಿಸಿದ್ದಾರೆ.

 


Share to all

You May Also Like

More From Author