ಇಂದಿನಿಂದ ಭಾರತ vs ಬಾಂಗ್ಲಾದೇಶ್ ನಡುವಣ ಸರಣಿ ಶುರು! ಹೊಸ ಭರವಸೆಯಲ್ಲಿ ಇಂಡಿಯಾ..!

Share to all

ಇಂದಿನಿಂದ ಭಾರತ vs ಬಾಂಗ್ಲಾದೇಶ್ ನಡುವಣ ಸರಣಿ ಶುರುವಾಗಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಉಭಯ ತಂಡಗಳಿಗೆ ಈ ಸರಣಿಯು ತುಂಬಾ ಮಹತ್ವದ್ದು. ಅದರಲ್ಲೂ ಭಾರತ ತಂಡವು ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಜಯ ಸಾಧಿಸುವ ಇರಾದೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ

ಮತ್ತೊಂದೆಡೆ ಪಾಕಿಸ್ತಾನ್ ತಂಡದ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದಿರುವ ಬಾಂಗ್ಲಾದೇಶ್ ತಂಡವು ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಲ್ಲಿದೆ. ಹೀಗಾಗಿ ಭಾರತದ ವಿರುದ್ಧದ ಸರಣಿಯನ್ನು ಗೆಲ್ಲುವ ಮೂಲಕ ಡಬ್ಲ್ಯೂಟಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರುವ ವಿಶ್ವಾಸದಲ್ಲಿದೆ.


Share to all

You May Also Like

More From Author