ಹೃದಯಾಘಾತದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ!

Share to all

ಬೆಂಗಳೂರು: ಕರ್ನಾಟಕದಾದ್ಯಂತ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಅವರು ನಿಧನ ಹೊಂದಿದ್ದಾರೆ. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು. ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ನಂತರ ಕರ್ನಾಟಕದಾದ್ಯಂತ ಸುದ್ದಿಯಾಗಿದ್ದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಕೆಂಪಣ್ಣ ಆಪ್ತರು, ಕುಟುಂಬದ ಮೂಲಗಳು ತಿಳಿಸಿವೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು.


Share to all

You May Also Like

More From Author