ಧರ್ಮಸ್ಥಳ ಸಂಘದಲ್ಲಿ ಸಾಲ ಪಡೆದಿದ್ದ ಮಹಿಳೆ ನೇಣಿಗೆ ಶರಣು!

Share to all

ಮಂಡ್ಯ:- ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಲಿಯೂರು ಗ್ರಾಮದಲ್ಲಿ ಸಾಲದವರ ಕಿರುಕುಳ ತಾಳಲಾರದೆ ಮನೆಯಲ್ಲೇ ನೇಣು ಬಿಗಿದುಕೊಂಡು ಮಹಿಳೆ ನೇಣಿಗೆ ಶರಣಾದ ಘಟನೆ ಜರುಗಿದೆ. 38 ವರ್ಷದ ಇದೇ ಗ್ರಾಮದ ಮಹಾಲಕ್ಷ್ಮಿ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮೃತ ಮಹಿಳೆಯು, ಧರ್ಮಸ್ಥಳ ಸಂಘದಲ್ಲಿ 2 ಲಕ್ಷ ರೂ.ಸಾಲ ತೆಗೆದುಕೊಂಡಿದ್ದಳು. ಅದರಂತೆ ಪ್ರತಿ ಬುಧವಾರ 1700 ಕಂತು ಕಟ್ಟಬೇಕಿತ್ತು. ಆದರೆ ಇತ್ತೀಚೆಗೆ ಸಾಲ ತೀರಿಸಲು ಪರದಾಡುತ್ತಿದ್ದರು. ಅಲ್ಲದೇ ಹಣ ಕಟ್ಟಲು ಮಹಿಳೆ ಸಮಯಾವಕಾಶ ಕೇಳಿದ್ದರೂ ಕೊಡದೆ ಸಂಘದ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು.

ಈ ವೇಳೆ ಮನನೊಂದು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಮೃತ ದೇಹವನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share to all

You May Also Like

More From Author