ಬೆದರಿಕೆ, ಜಾತಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

Share to all

ಬೆಂಗಳೂರು: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್​​ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಜಾಮೀನು ಸಿಕ್ಕಿದರೂ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮುನಿರತ್ನ ಅವರನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಬುಧವಾರ ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ದರು. ಈಗ ಜನಾಂಗಿಯ ನಿಂದನೆ, ಪ್ರಚೋದನೆ ಎಂದೆಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗುವುದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು. ಇಲ್ಲಿ ಚಲುವರಾಜುನೇ ನಿಜವಾದ ಆರೋಪಿ ಎಂದು ವಾದ ಮಂಡಿಸಿದ್ದರು. ರಾಜಕೀಯ ಕಾರಣಕ್ಕಾಗಿಯೇ ಮುನಿರತ್ನ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈಗಾಗಲೇ ಆರೋಪಿಯ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಆಗಿದೆ. ಸಾಕ್ಷಿದಾರರ ಹೇಳಿಕೆಯೂ ದಾಖಲಾಗಿದೆ. ಈಗ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜಾಮೀನು ನೀಡಬಹುದು ಎಂದು ವಕೀಲರು ಕೋರಿದ್ದರು.


Share to all

You May Also Like

More From Author