ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ: ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯ

Share to all

ದಾವಣಗೆರೆ: ಗಣೇಶನ ನಿಮಜ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹೌದು ದಾವಣಗೆರೆ ನಗರಾದಾದ್ಯಂತ ಭಯದ ವಾತಾವರಣಮನೆ ಮಾಡಿದ್ದು,ಕಲ್ಲು ತೂರಾಟ ನಡೆದ ಇಮಾಂನಗರದಲ್ಲಿ ರಸ್ತೆಯುದ್ದಕ್ಕು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್ ಪೊಲೀಸ್ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಾತ್ರಿಯಿಡೀ ನಿದ್ರೆಗಟ್ಟು ಗಸ್ತು ನಡೆಸಿವೆ. ಮತ್ತೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ದಾವಣಗೆರೆ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತರಲು ಮುಂದಾಗಿದ್ದಾರೆ.

ಈ ಘಟನೆಯಿಂದಾಗಿ ಬೆಳ್ಳಂಬೆಳಿಗ್ಗೆ ಜನಜಂಗುಲಿಯಿಂದ ತುಂಬಿರ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಖಾಲಿಖಾಲಿಯಾಗಿದ್ದು ಬಿಕೊ ಎನ್ನುತ್ತಿವೆ. ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳನ್ನು ನಿಲ್ಲಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರ್ತಿದ್ದು, ನಾಗರೀಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

 


Share to all

You May Also Like

More From Author