ಬೆಂಗಳೂರು: ಜಾತಿನಿಂದನೆ ಹಾಗು ಜೀವಬೆದರಿಕೆ ಕೇಸ್ನಲ್ಲಿ ಜೈಲು ಕಂಬಿ ಎಣಿಸುತ್ತಿರುವ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ರಿಲೀಫ್ ಕೊಟ್ಟಿದೆ. ಆದ್ರೆ ಮುನಿರತ್ನ ಗ್ರಹಚಾರಕ್ಕೆ ಮತ್ತೊಂದು ಕೇಸ್ ಬಿದ್ದಿದೆ. ಇದೀಗ ಮುನಿರತ್ನ ಕೊರಳಿಗೆ ಅತ್ಯಾಚಾರದ ಉರುಳು ಸುತ್ತಿಕೊಂಡಿದೆ. ಹೌದು ಶಾಸಕ ಮುನಿರತ್ನ ಗುರುವಾರ ಜಾಮೀನು ಪಡೆದು ಹೊರಬರುತ್ತಿದ್ದಂತೆ ಕಗ್ಗಲಿಪುರ ಠಾಣೆ ಪೊಲೀಸರು ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ಬಿಜೆಪಿ ಕಾರ್ಯಕರ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹನಿ ಟ್ರಾಪ್ ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಸಮಾಜ ಸೇವಕಿಯಾಗಿಯೂ ಗುರುತಿಸಿಕೊಂಡಿರುವ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಕಾರ್ಯಕರ್ತೆ ನೀಡಿದ ದೂರಿನ ಮೇರೆಗೆ ಕಗ್ಗಲಿಪುರ ಪೊಲೀಸ್ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.
ತನ್ನ ಮೇಲೆ ಎರಡು ಮೂರು ವರ್ಷಗಳಿಂದ ನಡೆದ ಲೈಂಗಿಕ ದೌರ್ಜನ್ಯ ಮತ್ತು ಹನಿ ಟ್ರಾಪ್ ಗೆ ಬಳಸಿಕೊಂಡಿರುವ ಕುರಿತು ದೂರು ಕೊಟ್ಟಿದ್ದಾರೆ, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರುಪರಿಸೀಲಿಸಿದ ಠಾಣೆಯ ಅಧಿಕಾರಿಗಳು ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಸಮಾಜ ಸೇವ ಕಾರ್ಯಗಳ ಮೂಲಕ ಮುನಿರತ್ನ ಅವರ ಪರಿಚಯವಾಗಿದ್ದ ಮಹಿಳೆ ನಂತರ ಅವರಿಗೆ ಹತ್ತಿರವಾಗಿ ಬಿಜೆಪಿ ಸೇರಿಕೊಂಡು ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು.
ಕಗ್ಗಲಿಪುರ ಠಾಣಾ ವ್ಯಾಪ್ತಿಯಲ್ಲಿ ಇರುವ ರೆಸಾರ್ಟ್ಗೆ ಆಗಾಗ ತನ್ನನ್ನು ಕರೆದೋಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ., ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಜೊತೆಗೆ ಹನಿ ಟ್ರಾಪ್ ಮಾಡಲು ಸಹ ನನ್ನನ್ನು ಬಳಕೆ ಮಾಡಿಕೊಂಡಿದ್ದಾರೆ. ಅವರ ಸೂಚನೆ ಮೇರೆಗೆ ಕೆಲವರ ಜೊತೆ ಖಾಸಗಿಯಾಗಿ ಕಳೆದಿರುವ ಕ್ಷಣಗಳ ವಿಡಿಯೋ ಮಾಡಿ ಕೊಟ್ಟಿದ್ದೇನೆ ಎಂದು ದೂರಿನಲ್ಲಿ ಬರೆದಿದ್ದಾರೆ..