ಬೆಂಗಳೂರು: ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜೊತೆ ಇದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜೊತೆ ಇದ್ದೇವೆ. ರಾಜ್ಯಪಾಲರ ಮುಂದಿಟ್ಟುಕೊಂಡು ದೇಶದೆಲ್ಲೆಡೆ ಇದೆ ರೀತಿ ಮಾಡುತ್ತಿದ್ದಾರೆ.
ಕುಮಾರಸ್ವಾಮಿ, ನಿರಾಣಿ, ಡಿ ನೋಟಿಫೀಕೇಷನ್ ಅವರ ಕೇಸ್ ಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳಲಿ. ನಮ್ಮ ರಾಜ್ಯಕ್ಕೆ ಇಷ್ಟು ಅನ್ಯಾಯ ಆಗಿದ್ದರೂ ನಮ್ಮ ರಾಜ್ಯದ ಪರ ಮಾತನಾಡಲಿಲ್ಲ ಬಿಜೆಪಿಯವರು. ನಮ್ಮ ಪ್ರಕಾರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಅಗತ್ಯ ಇರಲಿಲ್ಲ. ಈಗ ಅನುಮತಿ ಕೊಟ್ಟಿದ್ದಾರೆ. ಕೋರ್ಟ್ ತೀರ್ಪಿಗೆ ನಾವು ಗೌರವ ಕೊಡುತ್ತೇವೆ. ಡಬಲ್ ಬೆಂಚ್ ನಂತರ ಸುಪ್ರೀಂಕೋರ್ಟ್ ಇದೆ . ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.