ರೇಣುಕಾಸ್ವಾಮಿ ಕೇಸ್: ಬೇಲ್ ಸಿಕ್ಕರು ಡಿ ಗ್ಯಾಂಗ್ʼನ ಮೂವರು ಜೈಲಿನಲ್ಲೇ ಇರೋದು ಯಾಕೆ..?

Share to all

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಕೇಸ್​ನಲ್ಲಿ ಅನೇಕರನ್ನು ಅರೆಸ್ಟ್​ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ತನಿಖೆ ಅಂತ್ಯವಾಗಿದ್ದು, ಕೆಲವರಿಗೆ ಜಾಮೀನು ಸಿಕ್ಕಿದೆ. ಈ ಕೇಸ್​ನಲ್ಲಿ ಆರೋಪಿಗಳಾದ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಆದ್ರೆ ರೇಣುಕಾಸ್ವಾಮಿ ಕೇಸ್​ನಲ್ಲಿ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್ ಈ ಮೂವರಿಗೂ ಹೈಕೋರ್ಟ್​ ಜಾಮೀನು ನೀಡಿತ್ತು. ಆರೋಪಿಗಳಿಗೆ ಸೆಪ್ಟೆಂಬರ್ 23 ರಂದು ಜಾಮೀನು ನೀಡಿದ್ದರು ಜೈಲಿನಿಂದ ಇನ್ನು ಬಿಡುಗಡೆ ಆಗಿರಲಿಲ್ಲ. ಇದಕ್ಕೆ ಕಾರಣ ನ್ಯಾಯಾಲಯದ ಆದೇಶ ಪ್ರತಿಯು ತುಮಕೂರು ಕಾರಾಗೃಹದ ಜೈಲು ಅಧಿಕಾರಿಗಳನ್ನ ತಲುಪಿರಲಿಲ್ಲ. ಹೀಗಾಗಿ ಮೂವರು ಇನ್ನು ಜೈಲಿನಲ್ಲೇ ಉಳಿದುಕೊಂಡಿದ್ದಾರೆ.

ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ಎ15 ಆರೋಪಿ ಕಾರ್ತಿಕ್, ಎ16 ಕೇಶವಮೂರ್ತಿ ಹಾಗೂ ಎ17 ನಿಖಿಲ್ ನಾಳೆ ತುಮಕೂರು ಕಾರಾಗೃಹದಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ. ಮೂವರು ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ.

ಹೀಗಾಗಿ ಎಲ್ಲ ಪ್ರಕ್ರಿಯೆ ಮುಗಿಸಿ ಬಿಡುಗಡೆ ಆಗಬೇಕಿದೆ. ಸದ್ಯ 17 ಆರೋಪಿಗಳ ಪೈಕಿ ಮೂವರಿಗೆ ಮಾತ್ರ ಜಾಮೀನು ನೀಡಲಾಗಿದೆ. ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್​​ನಿಂದ ಬೇಲ್ ಸಿಕ್ಕರೇ, ಎ15 ಆರೋಪಿ ಕಾರ್ತಿಕ್ ಹಾಗೂ ಎ17 ಆರೋಪಿ ನಿಖಿಲ್​ಗೆ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇನ್ನು ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಉಳಿದ ಎಲ್ಲ ಆರೋಪಿಗಳು ರಾಜ್ಯದ ಬೇರೆ ಬೇರೆ ಜೈಲಿನಲ್ಲಿದ್ದಾರೆ.


Share to all

You May Also Like

More From Author