ಸಾಮಾಜಿಕ ಕಾರ್ಯಕರ್ತನಿಗೆ ಹನಿಟ್ರ್ಯಾಪ್ ಯತ್ನ: ಸಂಧ್ಯಾ ಪವಿತ್ರಾ ನಾಗರಾಜ್ ವಿರುದ್ಧ ದೂರು ದಾಖಲು

Share to all

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್‌ಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತೆ ಸಂಧ್ಯಾ, ಪವಿತ್ರಾ ನಾಗರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ. ಹೌದು ಬೆದರಿಕೆ ಹಾಕಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂದು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪವಿತ್ರಾ ಹಾಗೂ ಸಂಧ್ಯಾ ಪವಿತ್ರಾ ನಾಗರಾಜ್ ವಿರುದ್ದ ಭಾಸ್ಕರ್ ಪ್ರಸಾದ್ ಅವರು ದೂರು ದಾಖಲಿಸಿದ್ದಾರೆ.

ಪವಿತ್ರಾ ಎಂಬುವವರು ಚಳುವಳಿ ಹಾಗೂ ಹೋರಾಟಗಳಲ್ಲಿ ಭಾಸ್ಕರ್ ಪ್ರಸಾದ್​ಗೆ ಪರಿಚಯವಾಗಿದ್ದರು. ಸುಮಾರು 2 ವರ್ಷಗಳಿಂದ ಇವರಿಬ್ಬರ ನಡುವೆ ಮಾತುಕಥೆ ಇತ್ತು. ಕಳೆದ ಆ.8ರಂದು ಪವಿತ್ರಾ ಅವರು ವಾಟ್ಸಾಪ್ ಮೂಲಕ ಲೈಂಗಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ. ಮಾನಹರಣ ಮಾಡುವ ಉದ್ದೇಶದಿಂದ ಬೆದರಿಕೆ ಹಾಕಿ 10 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ನಂತರ ನೇರವಾಗಿ ಸಿಕ್ಕಾಗ ಅಪಪ್ರಚಾರ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಭಾಸ್ಕರ್ ಪ್ರಸಾದ್ ಅವರು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ 10 ಲಕ್ಷ ಹಣ ನೀಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.


Share to all

You May Also Like

More From Author