ಚೆನ್ನೈ ತಂಡಕ್ಕೆ ರೀ ಎಂಟ್ರಿ ಕೊಡ್ತಾರಾ ರವಿಚಂದ್ರನ್ ಅಶ್ವಿನ್!?

Share to all

ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಹೈ ಪರ್ಫಾರ್ಮೆನ್ಸ್ ಸೆಂಟರ್ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.


Share to all

You May Also Like

More From Author