ಬೆಂಗಳೂರು: ಬೆಳ್ಳಂಬೆಳಗ್ಗೆ ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರು ವಿಧಾನಸೌಧ ಕೂಗಳತೆಯ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಈ ವೇಳೆ ಕಾಫಿ ಬೋರ್ಡ್ ಸಿಗ್ನಲ್ ಬಳಿ ಸಿಗ್ನಲ್ ಜಂಪ್ ಮಾಡಿ ಆಟೋಗೆ ಲಾರಿ ಡ್ರೈವರ್ ಡಿಕ್ಕಿ ಹೊಡೆದಿದ್ದಾನೆ.
ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ನಮ್ಮ ಯಾತ್ರಿ ಆಪ್ ನಲ್ಲಿ ಆಟೋ ಚಾಲಕ ಇಮ್ರಾನ್ ಶಾಲಿನಿ ಅನ್ನೋ ಪ್ಯಾಸೆಂಜರ್ ನ ಪಿಕಪ್ ಮಾಡಿದ್ದ. ವಿಧಾನಸೌಧ ರಸ್ತೆಯಲ್ಲಿ ಬರ್ತಿದ್ದ ವೇಳೆ ಲಾರಿಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಲಾರಿ ಚಾಲಕ ಲಾರಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಮೃತದೇಹ ಬೌರಿಂಗ್ ಆಸ್ಪತ್ರೆಗೆ ರವಾನೆಯಾಗಿದ್ದು, ಕಬ್ಬನ್ ಪಾರ್ಕ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದ್ದಾರೆ.