Musheer Khan Accident: ಭೀಕರ ರಸ್ತೆ ಅಪಘಾತ: ಯುವ ಆಟಗಾರನಿಗೆ ಗಂಭೀರ ಗಾಯ

Share to all

ಲಕ್ನೋ: ಪ್ರತಿಭಾನ್ವಿತ ರಣಜಿ ಪ್ಲೇಯರ್‌ ಆಗಿರುವ 19 ವರ್ಷದ ಮುಶೀರ್‌ ಖಾನ್‌ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಮುಶೀರ್​ ಖಾನ್​ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.

ಮುಂಬೈ ಮೂಲದ ಆಟಗಾರನಾದ ಮುಶೀರ್‌ ಖಾನ್‌ ಇರಾನಿ ಕಪ್‌ ಟೈ ಪರವಾಗಿ ಆಡಲು ಕಾನ್ಪುರದಿಂದ ಲಕ್ನೋಗೆ ತನ್ನ ಕೋಚ್‌ ಆಗಿರುವ ತಂದೆ ನೌಶಾದ್‌ ಖಾನ್‌ ಅವರೊಂದಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ರಸ್ತೆ ಅಪಘಾತಕ್ಕೀಡಾಗಿ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆಂದು ತಿಳಿದುಬಂದಿದೆ.

ಪ್ರತಿಭಾನ್ವಿತ ರಣಜಿ ಪ್ಲೇಯರ್‌ ಆಗಿರುವ 19 ವರ್ಷದ ಮುಶೀರ್‌ ಖಾನ್‌ ಈವರೆಗೆ 9 ಪ್ರಥಮದರ್ಜೆ ಪಂದ್ಯಗಳನ್ನಾಡಿದ್ದಾರೆ. ಇತ್ತೀಚೆಗೆ ದುಲೀಪ್‌ ಟ್ರೋಫಿಯಲ್ಲಿ ಭಾರತ – ಎ ತಂಡದ ವಿರುದ್ಧ 181 ರನ್ ಗಳಿಸಿ ಮಿಂಚಿದ್ದರು.ಮುಂದಿನ ಅಕ್ಟೋಬರ್‌ 1 ರಿಂದ 5ರ ವರೆಗೆ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಮುಂಬೈನ ಇರಾನಿ ಕಪ್ ಟೈ ವಿರುದ್ಧ ರಣಜಿ ನಡೆಯಲಿದೆ.

ಅಪಘಾತಕ್ಕೀಡಾಗಿರುವ ಮುಶೀರ್‌ ಆರಂಭಿಕ ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಮತ್ತೊಂದು ವರದಿಯ ಪ್ರಕಾರ, ಕುತ್ತಿಗೆಗೆ ಭಾಗಕ್ಕೆ ಗಾಯವಾಗಿರುವುದರಿಂದ ಮೂರು ತಿಂಗಳ ಕಾಲ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

 


Share to all

You May Also Like

More From Author