ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿ ನೂರು ದಿನಗಳೇ ಕಳೆದಿವೆ.ಜೂನ್ 22 ರಂದು ಪೋಲಿಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ರು, ಪರಪ್ಪನ ಅಗ್ರಹಾರ ಜೈಲಿನಲ್ಲಿ 68 ದಿನಗಳ ಕಾಲ ಕಳೆದ ದಾಸ. ವಿಲ್ಸನ್ ಗಾರ್ಡನ್ ನಾಗನ ಜೊತೆ ಕಾಣಿಸಿಕೊಂಡು ರಾಜಾತಿಥ್ಯ ಪಡೆದು ಬಾರಿ ಸದ್ದು ಮಾಡಿದ್ರು. ಈ ಹಿನ್ನಲೆ ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನ ರಾಜ್ಯದ ವಿವಿಧ ಕಾರಾಗೃಹಗಳಿಗೆ ಶಿಫ್ಟ್ ಮಾಡಿದ್ರು.
ಇನ್ನೂ ಕೊಲೆ ಪ್ರಕರಣ ಸಂಬಂಧ ಇಂದು ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಸೆಷನ್ ಕೋರ್ಟ್ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಗೌಡ, ವಿನಯ್ ಸೇರಿ ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ದರ್ಶನ್ ಪರ ಸುನೀಲ್, ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಲಿದ್ದಾರೆ.
ವಿಶೇಷ ಸಾರ್ವಜನಿಕ ಅಭಿಯೋಜಕರು ಶುಕ್ರವಾರವೇ ದರ್ಶನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದರು. ಹೀಗಾಗಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತ್ತು.ಅದರಂತೆ ಇಂದು ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ ಐವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಇನ್ನು ಶುಕ್ರವಾರ ಪವಿತ್ರಾಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು. ಪವಿತ್ರಾ ಗೌಡ ಪಾತ್ರ ಹೆಚ್ಚಿಲ್ಲ, ಅದೇಗೆ ಕೊಲೆ ಆರೋಪ ಮಾಡಿದ್ದಾರೆ ಎಂದು ವಾದ ಮಂಡನೆ ಮಾಡಿದ್ದರು.