Virat Kohli : ಸಚಿನ್‌ ತೆಂಡೂಲ್ಕರ್ ಮತ್ತೊಂದು ದಾಖಲೆ ಮುರಿದ ವಿರಾಟ್ ಕೊಹ್ಲಿ!

Share to all

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ವಿರಾಟ್ ಕೊಹ್ಲಿ ಕೊನೆಗೂ ಮುರಿದಿದ್ದಾರೆ. ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 47 ರನ್ ಬಾರಿಸಿದರು. ಈ 47 ರನ್ ಗಳೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 27 ಸಾವಿರ ರನ್ ಪೂರೈಸಿದ್ದಾರೆ.

ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ 600 ಕ್ಕಿಂತ ಕಡಿಮೆ ಇನಿಂಗ್ಸ್​ಗಳಲ್ಲಿ 27 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅತೀ ವೇಗವಾಗಿ 27000 ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಈ ಮೊದಲು ಈ ದಾಖಲೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿತ್ತು.


Share to all

You May Also Like

More From Author