ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬುಮ್ರಾ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.
ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಕಳೆದ ಬಾರಿ ಅಗ್ರಸ್ಥಾನದಲ್ಲಿದ್ದ ಅಶ್ವಿನ್ ಅವರನ್ನು ಹಿಂದಿಕ್ಕಿ ಜಸ್ಪ್ರೀತ್ ಬುಮ್ರಾ ಮೊದಲ ಸ್ಥಾನಕ್ಕೇರಿದ್ದಾರೆ. ಇದೀಗ 869 ಅಂಕಗಳೊಂದಿಗೆ ಅಶ್ವಿನ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಅಂದಹಾಗೆ ಜಸ್ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್ ಬೌಲರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುತ್ತಿರುವುದು ಇದು 2ನೇ ಬಾರಿ. ಇದಕ್ಕೂ ಮುನ್ನ ಫೆಬ್ರವರಿ 2024ರ ಶ್ರೇಯಾಂಕ ಪಟ್ಟಿಯಲ್ಲಿ ಅವರು ನಂಬರ್-1 ಬೌಲರ್ ಆಗಿ ಹೊರಹೊಮ್ಮಿದ್ದರು.
ಅಷ್ಟೇ ಅಲ್ಲದೆ ಕ್ರಿಕೆಟ್ ಇತಿಹಾಸದಲ್ಲೇ ಮೂರು ಸ್ವರೂಪಗಳಲ್ಲೂ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಅಲ್ಲದೆ ಮೂರು ಸ್ವರೂಪಗಳಲ್ಲೂ ಅಗ್ರಸ್ಥಾನ ಅಲಂಕರಿಸಿದ ಭಾರತದ 2ನೇ ಆಟಗಾರ ಎಂಬ ಹಿರಿಮೆಯನ್ನೂ ಸಹ ತಮ್ಮದಾಗಿಸಿಕೊಂಡಿಸಿದ್ದಾರೆ.