ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು 10 ದಿನಗಳ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜಾಗಿದ್ದು, ಕಳೆದ ವರ್ಷ ಭೀಕರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರಳ ಮಟ್ಟದಲ್ಲಿ ಆಚರಣೆಗೆ ಮುಂದಾಗಿತ್ತು. ಆದರೆ, ಈ ವರ್ಷ ರಾಜ್ಯಾದ್ಯಂತ ಸಾಕಷ್ಟು ಮಳೆಯಿಂದ ಜಲಾಶಯಗಳು ತುಂಬಿದ ನಂತರ ಸರ್ಕಾರವು ಅದ್ಧೂರಿ ಉತ್ಸವಗಳನ್ನು ಘೋಷಿಸಿದ್ದು, ಪರಿಸ್ಥಿತಿ ಉತ್ತಮವಾಗಿ ಬದಲಾಗಿವೆ.
ಇನ್ನೂ ಮೈಸೂರು ದಸರಾದ ಉದ್ಘಾಟಕರಾದ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ಮಹಿಷಮರ್ಧಿನಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬಕ್ಕೆ ಚಾಲನೆ ನೀಡಿದರು.
ವೃಶ್ಚಿಕ ಲಗ್ನದ ಶುಭಮುಹೂರ್ತದಲ್ಲಿ ದೇವಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ವೈಭವದ ಚಾಲನೆ ನೀಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ರಾಜ್ಯ ಸರ್ಕಾರದ ಪ್ರತಿನಿಧಿಗಳು, ಸಚಿವರು, ಶಾಸಕರು ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು.
ನಂತರ ಮೈಸೂರು ದಸರಾದ ಉದ್ಘಾಟಕರಾದ ಹಿರಿಯ ಸಾಹಿತಿ ನಾಡೋಜ, ಡಾ.ಹಂಪಾ ನಾಗರಾಜಯ್ಯ ಅವರಿಗೆ ಜಿಲ್ಲಾಡಳಿತ ವತಿಯಿಂದ ಸಿಎಂ ಸಿದ್ದರಾಮಯ್ಯ ಅವರು ಹಾರ, ಶಾಲು ಹಾಕಿ, ನೆನಪಿನ ಕಾಣಿಕೆ ನೀಡಿ ಸನ್ಮಾನ ಮಾಡಿದರು.