ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ HDK ರಾಜೀನಾಮೆ ಕೊಡುವರೇ?: ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ

Share to all

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು ಅರಮನೆ ನಗರಿ ಮೈಸೂರಿನಲ್ಲಿ ವೈಭವದ ಚಾಲನೆ ದೊರೆಯಿತು. ನಂತರ ದಸರಾ ಉದ್ಘಾಟನೆ ಸಮಾರಂಭದ ವೇದಿಕೆಯ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಮಾತನಾಡಿದರು. ಈಗ ಎಲ್ಲರೂ ಗಾಜಿನ ಮನೆಯಲ್ಲಿ ಇದ್ದೇವೆ. ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದ್ಯಾ? ಎಫ್‌ಐಆರ್‌ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್‌ನಲ್ಲಿ ಇರುವವರು ರಾಜೀನಾಮೆ ಕೊಡುತ್ತಾರಾ?

ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ ಎಂದು ಪ್ರಶ್ನಿಸಿದರು. 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಲು ಆಗುತ್ತಾ? ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ನೀಡುವುದಕ್ಕೆ ಸಾಧ್ಯವೇ ಎಂದು ಪ್ರಶ್ನಿಸಿದರು.

ಒಂದು ಅತ್ಯಾಚಾರ, ಕೊಲೆಯನ್ನು ಮೂರು ತಿಂಗಳು ಮಾಧ್ಯಮ ತೋರಿಸುತ್ತದೆ. ಒಂದು ಎಫ್‌ಐಆರ್‌ ಅನ್ನು ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್‌ಐಆರ್‌ ಆಗಿದೆಯೋ ಎಲ್ಲರೂ ರಾಜೀನಾಮೆ ಕೊಡಿ. ಎಲ್ಲಾ ವಿಧಾನಸೌಧದ ಮುಂದೆ ನಿಂತುಕೊಳ್ಳಿ. ಬನ್ನಿ ನೋಡೋಣ ಎಂದು ಸವಾಲು ಎಸೆದರು.


Share to all

You May Also Like

More From Author