ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗೆ ಶಾಸಕ ಅರವಿಂದ ಬೆಲ್ಲದ ಒತ್ತಾಯ…
ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯು ನಮ್ಮ ರಾಜ್ಯದಲ್ಲಿ ಎರಡನೇ ಬೃಹತ್ ಮಹಾನಗರ ಪಾಲಿಕೆಯಾಗಿದೆ. ಈ ಪ್ರದೇಶವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಹುಬ್ಬಳ್ಳಿ ಮತ್ತು ಧಾರವಾಡ ಸಮೀಪದ ಅನೇಕ ಹಳ್ಳಿಗಳು ಪಾಲಿಕೆಗೆ ಸಮೀಪವಾಗುತ್ತಿವೆ. ಜನಸಂಖ್ಯೆಯು ಕೂಡ ಹೆಚ್ಚಿನ ಪ್ರಮಾಣದಲ್ಲಿದ್ದು, ಕೈಗಾರಿಕೆ ವಸತಿ ಹಾಗೂ ಶಿಕ್ಷಣದ ಎಲ್ಲ ಕ್ಷೇತ್ರಗಳು ಬೃಹತ್ ಆಕಾರವಾಗಿ ಬೆಳೆಯುತ್ತಿವೆ. ಸಾರ್ವಜನಿಕರ ಬೇಡಿಕೆಯು ಸಹ ಧಾರವಾಡಕ್ಕೆ ಪ್ರತ್ಯೇಕವಾಗಿ ಮಹಾನಗರ ಪಾಲಿಕೆಯಾಗುವುದರಿಂದ ಅನೇಕ ಅಭಿವೃದ್ಧಿ ಕಾರ್ಯಗಳೊಂದಿಗೆ ಸಾರ್ವಜನಿಕರ ಸಮಸ್ಯೆಗಳು ಕೂಡ ಶೀಘ್ರವಾಗಿ ಇತ್ಯರ್ಥವಾಗುವುದೆಂಬ ಹೊಂದಿರುತ್ತಾರೆ.
ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾಪಿಸುವುದು ಹಲವಾರು ಸಂಘಟನೆಗಳ ಬೇಡಿಕೆ ಕೂಡ ಆಗಿರುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಧಾರವಾಡದ ಸರ್ವತೋಮುಖ ಅಭಿವೃದ್ಧಿಯನ್ನು ಗಣನೆಗೆ ತೆಗೆದುಕೊಂಡು ಧಾರವಾಡಕ್ಕೆ ಪ್ರತ್ಯೇಕವಾದ ಮಹಾನಗರ ಪಾಲಿಕೆಯನ್ನು ಸ್ಥಾಪಿಸಲೇಬೇಕೆಂದು ಸಿಎಂ ಸಿದ್ಧರಾಮಯ್ಯ ಸಚಿವರಾದ ಬ್ಯೆರತಿ ಸುರೇಶ ಹಾಗೂ ಸಂತೋಷ ಲಾಡ ಅವರಿಗೆ ಶಾಸಕ ಅರವಿಂದ ಬೆಲ್ಲದ ಪತ್ರ ಬರೆದು ಒತ್ತಾಯಿಸಿದ್ದಾರೆ..
ಉದಯ ವಾರ್ತೆ ಹುಬ್ಬಳ್ಳಿ.