ಬೆಂಗಳೂರು:- ಬೆಂಗಳೂರು ಹೊರ ವಲಯದ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಚಲಿಸುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ಜರುಗಿದೆ.
ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರಸ್ತೆ ಮಧ್ಯದಲ್ಲೇ ಕಾರು ನಿಲ್ಲಿಸಿ ಚಾಲಕ ಹಾಗೂ ಇತರ ಪ್ರಯಾಣಿಕರು ಕೆಳಗಡೆ ಇಳಿದಿದ್ದಾರೆ. ಹೊಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಒಟ್ಟಾರೆ ಚಲಿಸುತ್ತಿದ್ದ ಕ್ರೇಟಾ ಕಾರು ಬೆಂಕಿ ಅವಘಡದಿಂದ ಸುಟ್ಟು ಕರಕಲಾಗಿದೆ.