ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳಿಂದ ವಿಕೃತಿ.. ದೇವರ ಮೂರ್ತಿಯ ನಾಲ್ಕು ಕೈಗಳನ್ನು ಕತ್ತರಿಸಿ ಮೂರ್ತಿ ಭಗ್ನಗೊಳಿಸಿದ ಅಪರಿಚಿತರು..
ಹುಬ್ಬಳ್ಳಿ:-ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪರ್ಣಾ ಅಪಾರ್ಟ್ಮೆಂಟ್ ನಲ್ಲಿರುವ ದೇವಸ್ಥಾನದ ದೇವರ ಮೂರ್ತಿ ಭಗ್ನಗೊಳಿಸಿದ ಘಟನೆ ನಡೆದಿದೆ.ರಾತ್ರೋ ರಾತ್ರಿ ದುಷ್ಕರ್ಮಿಗಳು ಭಗ್ನಗೊಳಿಸಿ ಪರಾರಿಯಾಗಿರಬಹುದು ಎನ್ನಲಾಗಿದೆ.
ದೇಶಪಾಂಡೆ ನಗರದ ಅಪರಣಾ ಅಪಾರ್ಟ್ಮೆಂಟ್’ನಲ್ಲಿಯ ದತ್ತಾತ್ರೇಯ ದೇವಸ್ಥಾನದ ದೇವರ ಮೂರ್ತಿ ಭಗ್ನಗೊಳಿಸಿದ್ದು .ಬೆಳಗ್ಗೆ ಪೂಜೆ ಮಾಡುವಾಗ ದೇವಸ್ಥಾನ ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸದ್ದಾರೆ.