ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರದ ತುಂಬಾ ಬಲಿಗಾಗಿ ಕಾಯ್ತಾಯಿದೆ. ಹೌದು ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ವಿದ್ಯುತ್ ತಂತಿ ಬಿದ್ದಿದ್ದು, ಕ್ಷಣಾರ್ಧದಲ್ಲೆ ಸುಟ್ಟುಕರಕಲಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ, ಮಂಜಮ್ಮ(50) ಮೃತ ದುರ್ಧೈವಿಯಾಗಿದ್ದು, ಮನೆ ಬಳಿ ನಿಂತಿದ್ದ ಮಹಿಳೆ ಮೇಲೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನಲೆ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆಯ ಸುಮಾರಿಗೆ ಮೃತ ಮಹಿಳೆ ಸೇರಿದಂತೆ ಇನ್ನಿ ಬರು ಮಹಿಳೆಯರು ಮನೆ ಬಳಿ ನಿಂತು ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಕೂಡಲೇ ಮತ್ತೊಬ್ಬ ಮಹಿಳೆ ಮೃತ ಮಂಜಮ್ಮನನ್ನು ಕಾಪಾಡಲು ನೋಡಿದರೂ ಆಗಿಲ್ಲ. ಆಗಲೇ ಮಂಜಮ್ಮನ ಪ್ರಾಣಪಕ್ಷಿ ಹಾರಿಹೋಗಿತ್ತು. ಸಧ್ಯ ಮರಣೋತ್ತರ ಪರೀಕ್ಷೆಗಾಗಿ ಮಹಿಳೆಯ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೃತ ಮಂಜಮ್ಮ ಮೈದುನ ಶಿವರಾಮ ಅವರ ದೂರು ಆಧರಿಸಿ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.