ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ: ಭಾರತೀಯರದ್ದೆ ಪಾರುಪತ್ಯ, ಹಾರ್ದಿಕ್ ಗೆ ಎಷ್ಟನೇ ಸ್ಥಾನ!?

Share to all

ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತೀಯರದ್ದೆ ಪಾರುಪತ್ಯ ಪಡೆದಿದ್ದಾರೆ. ಬಾಂಗ್ಲ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 39 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಹಾರ್ದಿಕ್ ಬೌಲಿಂಗ್​ನಲ್ಲೂ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ತಮ್ಮ ಆಟದ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಪಾಂಡ್ಯ, ಇದೀಗ ಟಿ20 ಆಲ್‌ರೌಂಡರ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಬರೋಬ್ಬರಿ 4 ಸ್ಥಾನ ಮೇಲೇರಿದ್ದು, 3ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಉಳಿದಿರುವ ಇನ್ನೇರಡು ಪಂದ್ಯಗಳಲ್ಲಿ ಹಾರ್ದಿಕ್ ತಮ್ಮ ಇದೇ ಆಟವನ್ನು ಮುಂದುವರೆಸಿದರೆ ನಂಬರ್ 1ಸ್ಥಾನಕ್ಕೇರುವ ಅವಕಾಶ ಹೊಂದಿದ್ದಾರೆ. ಹಾರ್ದಿಕ್ ಇದೀಗ 216 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್‌ನ ಲಿಯಾಮ್ ಲಿವಿಂಗ್‌ಸ್ಟನ್ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇವರಲ್ಲದೇ ನೇಪಾಳದ ದೀಪೇಂದ್ರ ಸಿಂಗ್ ಐರಿ ಎರಡನೇ ಸ್ಥಾನದಲ್ಲಿದ್ದಾರೆ.

ಇದಲ್ಲದೆ ಬಾಂಗ್ಲಾದೇಶದ ವಿರುದ್ಧ ಆಡಿದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದರು.ಅದರ ಲಾಭ ಪಡೆದಿರುವ ಜಡೇಜಾ ಟೆಸ್ಟ್ ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ. 468 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಜಡೇಜಾ ಮೊದಲ ಸ್ಥಾನದಲ್ಲಿದ್ದರೆ, 358 ರೇಟಿಂಗ್ ಅಂಕ ಹೊಂದಿರುವ ಆರ್​ ಅಶ್ವಿನ್ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಹಾಗೆಯೇ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಭರ್ಜರಿ ಲಾಭ ಪಡೆದಿದ್ದು ಪ್ರಸ್ತುತ, ಬುಮ್ರಾ 870 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ


Share to all

You May Also Like

More From Author