Ayudha Puja in Mysore: ಮೈಸೂರು ಅರಮನೆಯಲ್ಲಿಂದು ಆಯುಧ ಪೂಜೆ ಸಂಭ್ರಮ ಜೋರು!

Share to all

ಮೈಸೂರು: ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನವರಾತ್ರಿಯ 9 ದಿನವಾದ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಯುಧ ಪೂಜಾ ನೆರವೇರಿಸಲಿದ್ದಾರೆ. ಈ ಹಿನ್ನೆಲೆ ಅರಮನೆಯಲ್ಲಿ ಬೆಳಗ್ಗಿನಿಂದಲೇ ಆಯುಧ ಪೂಜೆಯ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ.

ಬೆಳಗ್ಗೆ 6.40ರಿಂದ 7.10ರೊಳಗೆ ಖಾಸಗಿ ಆಯುಧಗಳನ್ನು ಪೂಜೆ ಮಾಡಲಾಗಿದೆ. ಬಳಿಕ ಖಾಸಗಿ ಆಯುಧಗಳನ್ನು ಆನೆ ಬಾಗಿಲು ಮೂಲಕ ಕೋಡಿ ಸೋಮೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. 7.30ರಿಂದ 8 ಗಂಟೆಯೊಳಗೆ ದೇಗುಲದಿಂದ ಖಾಸಗಿ ಆಯುಧಗಳನ್ನ ಆನೆ ಬಾಗಿಲು ಮುಖಾಂತರ ಕಲ್ಯಾಣ ಮಂಟಪಕ್ಕೆ ಆಗಮಿಸುತ್ತವೆ.

9.05ಕ್ಕೆ ಚಂಡಿ ಹೋಮ ಪೂರ್ಣಾಹುತಿ, 11.45ಕ್ಕೆ ಪಟ್ಟದ ಆನೆ, ಕುದುರೆ, ಹಸು ಆನೆ ಬಾಗಿಲಿಗೆ ಆಗಮಿಸುತ್ತವೆ. ಮಧ್ಯಾಹ್ನ 12.20ರಿಂದ 12.45ರೊಳಗೆ ಅರಮನೆ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಲಿದೆ. ಸಂಜೆ ಖಾಸಗಿ ದರ್ಬಾರ್ ಬಳಿಕ ಸಿಂಹ ಮುಖ ವಿಸರ್ಜನೆ ನೆರವೇರುತ್ತದೆ. ನಂತರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮನೆ ದೇವರ ದರ್ಶನ ಮಾಡುತ್ತಾರೆ. ಬಳಿಕ ಮೈಸೂರು ಅರಮನೆಯಲ್ಲಿ ದಫ್ತಾರ್ ಪೂಜೆ ನೆರವೇರುತ್ತದೆ.


Share to all

You May Also Like

More From Author