India vs New Zealand: ಬೆಂಗಳೂರಿನಲ್ಲಿ ಇಂದಿನಿಂದ ಟೆಸ್ಟ್ ಪಂದ್ಯ; ಪ್ಲೇಯಿಂಗ್ 11 ಹೀಗಿರಲಿದೆ!

Share to all

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ಶುರುವಾಗಲಿದೆ. ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.ಏಕೆಂದರೆ ಈ ಮೂರು ಮ್ಯಾಚ್​ಗಳಲ್ಲಿ ಭಾರತ ತಂಡ ಗೆಲುವು ದಾಖಲಿಸಿದರೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲಿದೆ.

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧ ಕೊನೆಯ ಪಂದ್ಯವಾಡಿದ್ದ ಆಡುವ ಬಳಗವೇ ಇಲ್ಲೂ ಕೂಡ ಮುಂದುವರೆಯುವ ಸಾಧ್ಯತೆಯಿದೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಶುಭ್​ಮನ್ ಗಿಲ್ ಆಡಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸುವುದು ಖಚಿತ.

ಇನ್ನು ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ.

ಏಳನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಆಡಿದರೆ, ಎಂಟನೇ ಕ್ರಮಾಂಕದಲ್ಲಿ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯಲಿದ್ದಾರೆ. ಇನ್ನು ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಆಡುವ ಬಳಗದಲ್ಲಿರಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

ರೋಹಿತ್ ಶರ್ಮಾ
ಯಶಸ್ವಿ ಜೈಸ್ವಾಲ್
ಶುಭ್​ಮನ್ ಗಿಲ್
ವಿರಾಟ್ ಕೊಹ್ಲಿ
ಕೆಎಲ್ ರಾಹುಲ್
ರಿಷಭ್ ಪಂತ್
ರವೀಂದ್ರ ಜಡೇಜಾ
ರವಿಚಂದ್ರನ್ ಅಶ್ವಿನ್
ಜಸ್​ಪ್ರೀತ್ ಬುಮ್ರಾ
ಮೊಹಮ್ಮದ್ ಸಿರಾಜ್
ಆಕಾಶ್ ದೀಪ್


Share to all

You May Also Like

More From Author