ಕೂಲ್ ಕ್ಯಾಪ್ಟನ್ ಧೋನಿ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ!

Share to all

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಉತ್ತಮ ಆರಂಭ ಪಡೆದಿರಲಿಲ್. ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೇವಲ 2 ರನ್​ಗಳಿಸಿ ಔಟಾದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ವಿರಾಟ್ ಕೊಹ್ಲಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು

ಅಂದರೆ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು.

2004 ರಿಂದ 2019 ರವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ ಧೋನಿ ಒಟ್ಟು 535 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ 2ನೇ ಆಟಗಾರ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕಿಂಗ್ ಕೊಹ್ಲಿ ಒಟ್ಟು 536 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ.


Share to all

You May Also Like

More From Author