ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳೋರಿಗೆ ಗುಡ್ ನ್ಯೂಸ್! ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

Share to all

ನವರಾತ್ರಿ, ದಸರಾ ರಜೆಗೆ ಊರಿಗೆ ಹೋಗದಕ್ಕೆ ಸಾಧ್ಯವಾಗಿಲ್ವ, ರೈಲು ಟಿಕೆಟ್ ಸಿಗದೆ ಬಹಳ ಬೇಜಾರಾಗಿತ್ತಾ, ಹಾಗಾದ್ರೆ ಇನ್ನು ಬೇಸರ ಮಾಡಿಕೊಳ್ಳಬೇಡಿ, ದೀಪಾವಳಿಗೆ ಊರಿಗೆ ಹೋಗಬಹುದುಹೌದು ಹುಬ್ಬಳ್ಳಿ, ಮಂಗಳೂರು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ವಲಯ ಗುಡ್ನ್ಯೂಸ್ನೀಡಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25ಕ್ಕೆ ಮಂಗಳೂರು ಜಂಕ್ಷೆನ್ ತಲುಪಲಿದೆ.

ರೈಲು ಸಂಖ್ಯೆ 07312: ನವೆಂಬರ್ 3 ರಂದು ಮಂಗಳೂರು ಜಂಕ್ಷನ್ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ನವೆಂಬರ್​ 4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್‌, ಚನ್ನರಾಯಪಟ್ಟಣೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ರೈಲು 1 ಎಸಿ ಟು ಟೈಯರ್ ಬೋಗಿಗಳು, 2 ಫಸ್ಟ್​​ ಎಸಿ ಕಮ್​​ ತ್ರಿ ಟೈಯರ್ ಬೋಗಿಗಳು​​, 3 ಎಸಿ ತ್ರಿ ಟೈಯರ್ ಬೋಗಿಗಳು, 5 ಸ್ವೀಪರ್ ಕ್ಲಾಸ್ ಬೋಗಿಗಳು, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳನ್ನು ಹೊಂದಿದೆ.


Share to all

You May Also Like

More From Author