ಕಾಸರಗೋಡಿನಲ್ಲಿ ಭಾರೀ ಪಟಾಕಿ ಅವಘಡ: 150 ಮಂದಿಗೆ ಗಾಯ, ಸಾವು-ನೋವಿನ ಆತಂಕ

Share to all

ಕೇರಳ ರಾಜ್ಯದ ಕಾಸರಗೋಡಿನಲ್ಲಿ ಭಾರಿ ಪಾಟಾಕಿ ಅವಘಡ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವದ ವೇಳೆ ದುರಂತ ಸಂಭವಿಸಿದೆ. 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಹೌದು ಪಟಾಕಿ ದುರಂತ ಸಂಭವಿಸಿದ್ದು 150 ಮಂದಿ ಗಾಯಗೊಂಡಿದ್ದು 8 ಮಂದಿಯ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ಮಧ್ಯರಾತ್ರಿ 12:30 ಸುಮಾರಿಗೆ ಅಪಘಾತ ಸಂಭವಿಸಿದೆ.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ದೇವಸ್ಥಾನದ ಅಧಿಕಾರಿಗಳು ಪಟಾಕಿ ಸಿಡಿಸಲು ಅನುಮತಿ ಪಡೆದಿದರಲಿಲ್ಲ. ಪೊಲೀಸರು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆ ಈಗಾಗಲೇ ಆರಂಭವಾಗಿದೆ ಎಂದು ಕಾಸರಗೋಡು ಜಿಲ್ಲಾಧಿಕಾರಿ ಕೆ ಇಂಬಶೇಖರ್ಹೇಳಿದ್ದಾರೆ.


Share to all

You May Also Like

More From Author