ಬೆಂಗಳೂರು:- ಇಷ್ಟು ದಿನ ಟಿಕೆಟ್ ಖರೀದಿ ಮಾಡದೇ ಫ್ರೀ ಆಗಿ ಬಸ್ ಸಂಚಾರ ಮಾಡುತ್ತಿದ್ದ ಮಹಿಳೆಯರಿಗೆ ಈ ಸುದ್ದಿ ಬೇಸರ ಉಂಟು ಮಾಡಿದೆ. ಏಕೆಂದರೆ ಶೀಘ್ರವೇ ಶಕ್ತಿ ಯೋಜನೆ ನಿಲ್ಲಿಸಲಾಗುವ ಸುದ್ದಿ ಇದೀಗ ಬಹಿರಂಗವಾಗಿದೆ. ಇದೇ ವಿಚಾರವಾಗಿ DCM ಡಿಕೆಶಿ ಕೂಡ ಮಾತನಾಡಿದ್ದು, ಮಹಿಳೆಯರ ಬೇಸರ ದುಪ್ಪಟ್ಟು ಮಾಡಿದೆ. ಎಸ್, ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ಖುದ್ದು ಡಿಸಿಎಂ ಡಿಕೆಶಿವಕುಮಾರ್ ಸುಳಿವು ಕೊಟ್ಟಿದ್ದಾರೆ.
ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್ಗೆ ದುಡ್ಡು ಕೊಡುತ್ತೇವೆ ಆದರೆ ಬಸ್ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ.
ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧ ಎಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.