IND vs SA: ಭಾರತ ವಿರುದ್ಧದ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ: ಬಲಿಷ್ಠ ಆಟಗಾರರೇ ನೇಮಕ!

Share to all

ಸೂರ್ಯಕಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಿದೆ. ಪ್ರವಾಸದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನವೆಂಬರ್ 8 ರಿಂದ 4 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಭಾರತ ವಿರುದ್ಧ ಟಿ20 ಸರಣಿಗೆ ಇದೀಗ ಈ 16 ಸದಸ್ಯರ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದೆ. ತಂಡದ ಕಮಾಂಡ್ ಅನ್ನು ಐಡೆನ್ ಮಾರ್ಕ್ರಾಮ್ ಅವರ ಕೈಯಲ್ಲಿ ನೀಡಲಾಗಿದೆ. ಸ್ಟಾರ್ ವೇಗದ ಬೌಲರ್‌ಗಳಾದ ಮಾರ್ಕೊ ಜೆನ್ಸನ್ ಮತ್ತು ಜೆರಾಲ್ಡ್ ಕೊಯೆಟ್ಜಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟೀಂ ಇಂಡಿಯಾ ವಿರುದ್ಧದ ಸರಣಿಗೆ ದಕ್ಷಿಣ ಆಫ್ರಿಕಾ ಹಲವು ಸ್ಟಾರ್ ಆಟಗಾರರಿಗೆ ಅವಕಾಶ ನೀಡಿದೆ. ಇದರಲ್ಲಿ ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್ ಮತ್ತು ಕೇಶವ್ ಮಹಾರಾಜ್ ಸೇರಿದ್ದಾರೆ. ಮೇಲೆ ಹೇಳಿದಂತೆ ಕಗಿಸೊ ರಬಾಡ ತಂಡದಿಂದ ಹೊರಬಿದ್ದಿದ್ದು, ಅವರಿಗೆ ವಿಶ್ರಾಂತಿ ನೀಡಲಾಗಿದೆ. ರಬಾಡ ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಎರಡೂ ಟೆಸ್ಟ್ ಪಂದ್ಯಗಳಲ್ಲಿ ಅವರು ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಈ ಪ್ರದರ್ಶನವನ್ನು ಗಮನದಲ್ಲಿರಿಸಿಕೊಂಡಿರುವ ಕ್ರಿಕೆಟ್ ದಕ್ಷಿಣ ಆಫ್ರಿಕಾ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ರಬಾಡರನ್ನು ಫಿಟ್​ ಆಗಿ ಇರಿಸಲು ನಿರ್ಧರಿಸಿದ್ದು, ಅವರಿಗೆ ವಿಶ್ರಾಂತಿ ನೀಡಿದೆ.

ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಓಟಿನೆಲ್ ಬಾರ್ಟ್‌ಮನ್, ಜೆರಾಲ್ಡ್ ಕೊಟ್ಜಿಯಾ, ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸನ್, ಹೆನ್ರಿಕ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹ್ಲಾಲಿ ಎಂಪೊಂಗ್ವಾನಾ, ನ್ಕಾಬಾ ಪೀಟರ್, ರಿಯಾನ್ ಸಿಮೆಲಾನೆಟನ್, ಆಂಡಿಲ್ ಸಿಮೆಲೆನ್, ಲುಥೋ ಸಿಪಾಮ್ಲಾ (3ನೇ ಮತ್ತು 4ನೇ ಟಿ20), ಮತ್ತು ಟ್ರಿಸ್ಟಾನ್ ಸ್ಟಬ್ಸ್.

ಟಿ20 ಸರಣಿಗೆ ಟೀಂ ಇಂಡಿಯಾ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷ್‌ದೀಪ್ ಸಿಂಗ್, ವೈಶಾಖ್ ವಿಜಯ್ ಕುಮಾರ್, ಅವೇಶ್ ಖಾನ್, ಯಶ್ ದಯಾಳ್


Share to all

You May Also Like

More From Author