ನವದೆಹಲಿ:- ತಿರುಪತಿ ನಗರವನ್ನು ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ತಿರುಪತಿ ಲಡ್ಡು ಪ್ರಕರಣ ಇತ್ತೀಚೆಗೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು , ಮೀನಿನ ಎಣ್ಣೆ ಬೆರಕೆ ಮಾಡಿದ್ದಾರೆ ಎಂಬ ಆರೋಪವೂ ಇತ್ತು. ಆದರೆ ಇದರ ತನಿಖೆಯನ್ನು ಸಿಬಿಐ ತಂಡವೇ ನಡೆಸಬೇಕು ಹಾಗೂ ತಿರುಪತಿ ನಗರವನ್ನು ಪ್ರತ್ಯೇಕವಾಗಿ ಕೇಂದ್ರಾಡಳಿತ ಪ್ರದೇಶವಾಗಿ ಮಾಡಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನವೆಂಬರ್ 8 ರಂದು ವಜಾಗೊಳಿಸಿದೆ.
ತಿರುಪತಿ ಲಡ್ಡು ವಿವಾದದ ಕುರಿತು ಕೇಂದ್ರೀಯ ತನಿಖಾ ದಳ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ .
ಈ ಹಿನ್ನೆಲೆಯಲ್ಲಿ ಸಿಬಿಐನಿಂದ ತನಿಖೆ ನಡೆಸುವಂತೆ ಪ್ರಜಾಶಾಂತಿ ಪಕ್ಷದ ಅಧ್ಯಕ್ಷ ಕೆಎ ಪಾಲ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ತಿರುಪತಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವಂತೆಯೂ ಕೇಳಿಕೊಂಡಿದ್ದರು. ಆದರೆ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ, ಮಹತ್ವದ ತೀರ್ಪನ್ನು ನೀಡಿದೆ