ಟೀಮ್ ಇಂಡಿಯಾವು ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು.
ಈ 219 ರನ್ಗಳೊಂದಿಗೆ ಟೀಮ್ ಇಂಡಿಯಾ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಅದು ಕೂಡ ಜಪಾನ್ ದೇಶದ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಬಾರಿ 200 ಪ್ಲಸ್ ಸ್ಕೋರ್ಗಳಿಸಿದ ವಿಶ್ವ ದಾಖಲೆಯೊಂದು ಜಪಾನ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಜಪಾನ್ ತಂಡವು ಒಟ್ಟು 7 ಬಾರಿ 200+ ಸ್ಕೋರ್ಗಳಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದೆ. ಇದೀಗ ಈ ದಾಖಲೆಯನ್ನು ಭಾರತೀಯರು ಮುರಿದಿದ್ದಾರೆ.